Nehemiah 10:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 28
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
Kannada BSI Bible 2016
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯುವದಾಗಿ ಆಣೆಯಿಟ್ಟು ಪ್ರಮಾಣಮಾಡಿದರು. ಹೇಗಂದರೆ -
Kannada Bible (KNCL) BSI 2016
ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;