Nehemiah 10:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.
Kannada BSI Bible 2016
ಎಂದೂ ದೇಶದ ಜನರು ಸಬ್ಬತ್‌ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್‌ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶನಿವಾಸಿಗಳು ಮಾರುವದಕ್ಕೋಸ್ಕರ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವದಿಲ್ಲ; ಪ್ರತಿಯೊಂದು ಏಳನೆಯ ವರುಷ [ಭೂವಿುಯ ಸಾಗುವಳಿಯನ್ನೂ ] ಹೆರರು ಕೊಡಬೇಕಾದ ಸಾಲವನ್ನೂ ಬಿಟ್ಟು ಬಿಡುತ್ತೇವೆ;
Kannada Bible (KNCL) BSI 2016
ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.