Nehemiah 10:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.
Kannada BSI Bible 2016
ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್‌ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,
Kannada Bible (KNCL) BSI 2016
ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.