Nehemiah 11:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೀಕ ವಂಶಕ್ಕೆ ಸೇರಿದ ಉಜ್ಜೀಯು ಜೆರುಸಲೇಮಿನಲ್ಲಿ ಲೇವಿಯರಿಗೆಲ್ಲಾ ಮುಖ್ಯಸ್ಥನಾಗಿದ್ದನು. ಉಜ್ಜೀಯು ಬಾನೀಯ ಮಗ. (ಬಾನೀಯು ಹಷಬ್ಯನ ಮಗ; ಹಷಬ್ಯನು ಮತ್ತನ್ಯನ ಮಗ; ಮತ್ತನ್ಯನು ಮೀಕನ ಮಗ.) ಉಜ್ಜೀಯು ಆಸಾಫನ ಸಂತಾನಕ್ಕೆ ಸೇರಿದವನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.
Kannada BSI Bible 2016
ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯ ಸೇವಾ ಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಯೆರೂಸಲೇವಿುನಲ್ಲಿದ್ದ ಲೇವಿಯರ ನಾಯಕನು.
Kannada Bible (KNCL) BSI 2016
ದೇವಾಲಯ ಸೇವಾಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಜೆರುಸಲೇಮಿನಲ್ಲಿದ್ದ ಲೇವಿಯರ ನಾಯಕನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೀಕನ ಮಗ, ಮತ್ತನ್ಯನ ಮಗ, ಹಷಬ್ಯನ ಮಗ, ಬಾನೀಯ ಮಗ ಉಜ್ಜೀಯು ಯೆರೂಸಲೇಮಿನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ವಂಶದಲ್ಲಿರುವ ಹಾಡುಗಾರನಾದ ಉಜ್ಜೀಯನು ದೇವರ ಆಲಯ ಕಾರ್ಯದ ಮೇಲೆ ಅಧಿಕಾರಿಯಾಗಿದ್ದನು.