Nehemiah 12:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಯೆಹೂದದ ನಾಯಕರಿಗೆ ಗೋಡೆಯ ಮೇಲೆ ನಿಂತುಕೊಳ್ಳಲು ಹೇಳಿದೆನು. ಅಲ್ಲದೆ ದೇವರಿಗೆ ಕೃತಜ್ಞತಾಸ್ತುತಿ ಮಾಡಲು ಗಾಯಕರ ಎರಡು ದೊಡ್ಡ ಗುಂಪುಗಳನ್ನು ಆರಿಸಿಕೊಂಡೆನು. ಒಂದು ಗುಂಪಿನವರು ಮೆರವಣಿಗೆಯಿಂದ ಬಲಗಡೆಯಿದ್ದ ತಿಪ್ಪೆಬಾಗಿಲಿನ ಕಡೆಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.
Kannada BSI Bible 2016
ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನಾನು ಯೆಹೂದ ಪ್ರಭುಗಳನ್ನು ಗೋಡೆಯ ಮೇಲೆ ಕರಕೊಂಡು ಬಂದು ಭಜನ ಮಂಡಲಿಯವರಿಗೆ - ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದೆನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಲಿನಿಂದ ಬಲಗಡೆಗೆ ಹೋದರು.
Kannada Bible (KNCL) BSI 2016
ಆಮೇಲೆ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದೆ; ಭಜನೆ ಮಂಡಲಿಯವರಿಗೆ, “ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಿ,” ಎಂದು ಅಪ್ಪಣೆಮಾಡಿದೆ. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ, ಸ್ತುತಿಸಲು ಎರಡು ಗುಂಪುಗಳನ್ನು ನೇಮಿಸಿದೆನು. ಒಂದು ಗುಂಪಿನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಿಲ ಕಡೆಗೆ ಹೋದರು.