Nehemiah 12:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಆಸಾಫನ ಸಹೋದರರಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ ಮತ್ತು ಹನಾನೀ ಇದ್ದರು. ದೇವಮನುಷ್ಯನಾದ ದಾವೀದನು ತಯಾರಿಸಿದ್ದ ವಾದ್ಯಗಳು ಅವರ ಬಳಿಯಲ್ಲಿದ್ದವು. ಎಜ್ರನು ಗೋಡೆಯನ್ನು ಪ್ರತಿಷ್ಠೆ ಮಾಡಲು ಒಂದು ತಂಡದ ಜನರನ್ನು ತನ್ನೊಂದಿಗೆ ಕರೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.
Kannada BSI Bible 2016
ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ವಿುಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳು.
Kannada Bible (KNCL) BSI 2016
ಜೆಕರ್ಯನೂ ದೈವಪುರುಷ ದಾವೀದನ ವಾದ್ಯಗಳನ್ನು ಹಿಡಿದಿದ್ದ. ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಾಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮನುಷ್ಯನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರೀಯನ ಸಹೋದರರಾದ ಶೆಮಾಯ, ಅಜರಯೇಲ್, ಮಿಲಲೈ, ಗಿಲಲೈ, ಮಾಯೈ, ನೆತನೆಯೇಲ್, ಯೆಹೂದ, ಹನಾನೀ ಎಂಬವರು ನಡೆದರು; ನಿಯಮಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.