Nehemiah 12:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.
Kannada BSI Bible 2016
ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಎಫ್ರಾಯೀಮ್ ಬಾಗಲು, ಯೆಷಾನಾ ಬಾಗಲು, ಮೀನು ಬಾಗಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಲಿನವರೆಗೂ ಹೋಗಿ ಸೆರೆಮನೆಯ ಬಾಗಲಿನ ಬಳಿಯಲ್ಲಿ ನಿಂತೆವು.
Kannada Bible (KNCL) BSI 2016
ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.