Nehemiah 12:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
(ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.
Kannada BSI Bible 2016
ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಯನ ಮಂಡಲಿಗಳೂ ಕೃತಜ್ಞತಾಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಇದ್ದವಷ್ಟೆ.
Kannada Bible (KNCL) BSI 2016
ಗಾಯನಮಂಡಲಿಗಳು ಕೃತಜ್ಞತಾ ಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ, ದಾವೀದನ ಮತ್ತು ಆಸಾಫನ ಕಾಲದಲ್ಲೇ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿಯೇ ದೇವರಿಗೆ ಸ್ತೋತ್ರವನ್ನೂ, ಕೃತಜ್ಞತೆಯನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಿದ್ದರು.