Nehemiah 13:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.
Kannada BSI Bible 2016
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರಪಾರಾಯಣವು ನಡೆಯುತ್ತಿರಲಾಗಿ ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದು;
Kannada Bible (KNCL) BSI 2016
ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು.