Nehemiah 13:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
Kannada BSI Bible 2016
ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡಿಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಭೂಸ್ವಾಸ್ತ್ಯಗಳಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
Kannada Bible (KNCL) BSI 2016
ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಪಾಲುಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡೆಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಆಸ್ತಿಯಿದ್ದಲ್ಲಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು.