Nehemiah 13:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.
Kannada BSI Bible 2016
ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.
Kannada Bible (KNCL) BSI 2016
ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ.