Nehemiah 13:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.
Kannada BSI Bible 2016
ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.
Kannada Bible (KNCL) BSI 2016
ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.