Nehemiah 13:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಯೆಹೂದ ಪ್ರಾಂತದ ಗೌರವಸ್ಥ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
Kannada BSI Bible 2016
ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್‌ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಯೆಹೂದ ಶ್ರೀಮಂತರಿಗೆ - ನೀವು ಮಾಡುವದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತೀರಿ.
Kannada Bible (KNCL) BSI 2016
ಆಗ ನಾನು ಯೆಹೂದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ ಅವರಿಗೆ, “ಸಬ್ಬತ್ ದಿನವನ್ನು ನೀವು ಅಪವಿತ್ರ ಮಾಡುವ ಈ ಕೆಟ್ಟ ಕಾರ್ಯವೇನು?