Nehemiah 13:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಆ ಕಾರಣದಿಂದ ನಮ್ಮ ದೇವರು ಇಂಥಾ ತೊಂದರೆಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.
Kannada BSI Bible 2016
ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದ ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ ನಮ್ಮ ಪಟ್ಟಣದ ಮೇಲೆಯೂ ಬರಮಾಡಿದನಲ್ಲವೇ. ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲ್ಯರ ಮೇಲಿದ್ದ ದೇವಕೋಪವನ್ನು ಹೆಚ್ಚಿಸುತ್ತೀರೇನು ಎಂದು ಹೇಳಿ ಅವರನ್ನು ಗದರಿಸಿದೆನು.
Kannada Bible (KNCL) BSI 2016
ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”