Nehemiah 13:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.
Kannada BSI Bible 2016
ಆದಕಾರಣ ಸಬ್ಬತ್‌ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್‌ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್‌ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸಬ್ಬತ್‍ದಿನ ಪ್ರಾರಂಭವಾಗುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳಲ್ಲಿ ಕತ್ತಲಾಗಿರುವಾಗಲೇ ಕದಗಳನ್ನು ಮುಚ್ಚಿಸಿ ಸಬ್ಬತ್ ದಿನವು ಗತಿಸುವದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಕಾವಲಿರಿಸಿದೆನು.
Kannada Bible (KNCL) BSI 2016
ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಬ್ಬತ್ ದಿನಕ್ಕೆ ಮುಂಚೆ ಯೆರೂಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗಲಾರಂಭಿಸಿದಾಗ ಬಾಗಿಲುಗಳನ್ನು ಹಾಕುವ ಹಾಗೆಯೂ, ಸಬ್ಬತ್ ದಿನವು ತೀರುವವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಸಬ್ಬತ್ ದಿನದಲ್ಲಿ ಹೊರೆ ಏನಾದರೂ ಒಳಗೆ ತರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಇಟ್ಟೆನು.