Nehemiah 13:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದೆರಡು ಬಾರಿ ವ್ಯಾಪಾರಸ್ತರು ನಗರದ ಹೊರಗಡೆಯೇ ರಾತ್ರಿಯಲ್ಲಿ ಉಳಿದುಕೊಳ್ಳಬೇಕಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.
Kannada BSI Bible 2016
ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ವರ್ತಕರೂ ಎಲ್ಲಾ ತರದ ದಿನಸುಗಳನ್ನು ಮಾರುವದಕ್ಕೆ ಬಂದವರೂ ಒಂದೆರಡು ಸಾರಿ ಯೆರೂಸಲೇವಿುನ ಹೊರಗೆ ಇಳುಕೊಂಡರು.
Kannada Bible (KNCL) BSI 2016
ಆದುದರಿಂದ ವರ್ತಕರು ಹಾಗು ಎಲ್ಲ ತರದ ದಿನಸುಗಳನ್ನು ಮಾರುವುದಕ್ಕೆ ಬಂದವರು ಒಂದೆರಡು ಸಾರಿ ಜೆರುಸಲೇಮಿನ ಹೊರಗಡೆಯೇ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ವರ್ತಕರೂ, ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.