Nehemiah 13:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಡೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.
Kannada BSI Bible 2016
ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಕಾಲದಲ್ಲಿ ನಾನು ಅಷ್ಡೋದ್ ಅಮ್ಮೋನಿಯ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಮಾಡಿ
Kannada Bible (KNCL) BSI 2016
ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು.