Nehemiah 13:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.
Kannada BSI Bible 2016
ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು.
Kannada Bible (KNCL) BSI 2016
“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು.