Nehemiah 13:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನೀವು ಸಹ ಅನ್ಯಸ್ತ್ರೀಯರನ್ನು ಮದುವೆಯಾಗಿ ಭಯಂಕರವಾದ ಪಾಪಗಳನ್ನು ಮಾಡುತ್ತಿದ್ದೀರಿ. ನೀವು ದೇವರಿಗೆ ವಿಧೇಯರಾಗಲಿಲ್ಲ” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು.
Kannada BSI Bible 2016
ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ನೀವು ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ನಡಿಸಿ ದೇವರಿಗೆ ದ್ರೋಹಿಗಳಾಗುವದನ್ನು ನಾವು ಒಪ್ಪಿಕೊಳ್ಳಬೇಕೋ ಎಂದು ಅವರನ್ನು ಗದರಿಸಿ ಅವರಿಂದ - ಅನ್ಯರ ಮಕ್ಕಳಿಗೆ ಹೆಣ್ಣುಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು ಎಂಬ ಧರ್ಮವಿಧಿಯನ್ನು ಕೈಕೊಳ್ಳುವದಾಗಿ ದೇವರ ಹೆಸರಿನಲ್ಲಿ ಪ್ರಮಾಣಮಾಡಿಸಿದೆನು.
Kannada Bible (KNCL) BSI 2016
ಹೀಗಿರಲಾಗಿ, ನೀವೂ ಅನ್ಯಮಹಿಳೆಯರನ್ನು ಮದುವೆಮಾಡಿಕೊಂಡು, ಅದೇ ಘೋರವಾದ ದುಷ್ಕೃತ್ಯವನ್ನು ನಡೆಸಿ, ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳುವುದಿಲ್ಲ,” ಎಂದು ಅವರನ್ನು ಗದರಿಸಿದೆ.”ಅನ್ಯರ ಮಕ್ಕಳಿಗೆ ಹೆಣ್ಣು ಕೊಡಬಾರದು; ನಮಗಾಗಲಿ ನಮ್ಮ ಮಕ್ಕಳಿಗಾಗಲಿ ಅವರಿಂದ ಹೆಣ್ಣು ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಗೊಳ್ಳುವುದಾಗಿ ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣ ಮಾಡಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ವಿದೇಶಿ ಸ್ತ್ರೀಯರನ್ನು ಮದುವೆಮಾಡಿಕೊಂಡು, ನಮ್ಮ ದೇವರಿಗೆ ಅಪರಾಧಮಾಡಿ, ಅದೇ ಘೋರವಾದ ದುಷ್ಕೃತ್ಯವನ್ನು ಮಾಡಲು ನಾವು ಒಪ್ಪಿಕೊಳ್ಳುವುದಿಲ್ಲ ನಿಮ್ಮ ಮಾತು ಕೇಳಬಹುದೋ?” ಎಂದು ಗದರಿಸಿದೆನು.