Nehemiah 13:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.
Kannada BSI Bible 2016
ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.
Kannada Bible (KNCL) BSI 2016
ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.