Nehemiah 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
Kannada BSI Bible 2016
ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್‌ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅರಸನ ಪಾನಸೇವಕನಾಗಿದ್ದೆನು. ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರುಷದ ಚೈತ್ರಮಾಸದಲ್ಲಿ ಅರಸನು ದ್ರಾಕ್ಷಾರಸಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.
Kannada Bible (KNCL) BSI 2016
ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ.