Nehemiah 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
Kannada BSI Bible 2016
ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್‍ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
Kannada Bible (KNCL) BSI 2016
ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.