Nehemiah 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
Kannada BSI Bible 2016
ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇವಿುನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಲಿಗೆ ಹೋದೆನು.
Kannada Bible (KNCL) BSI 2016
ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ರಾತ್ರಿಯಲ್ಲಿ ಕಣಿವೆಯ ಬಾಗಿಲಿಂದ ಹೊರಟು, ಸರ್ಪದ ಬಾವಿಯನ್ನು ದಾಟಿ, ತಿಪ್ಪೆ ದಿಬ್ಬೆಯ ಬಾಗಿಲಿಗೆ ಬಂದು, ಯೆರೂಸಲೇಮಿನ ಕೆಡವಿ ಹಾಕಲಾದ ಗೋಡೆಗಳನ್ನೂ, ಬೆಂಕಿಯಿಂದ ಸುಡಲಾದ ಅದರ ಬಾಗಿಲುಗಳನ್ನೂ ಚೆನ್ನಾಗಿ ಕಂಡೆನು.