Nehemiah 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಗಳನ್ನು ಪರೀಕ್ಷಿಸಿ ಕೊನೆಗೆ ಹಿಂದಿರುಗಿ ಕಣಿವೆ ಬಾಗಿಲ ಮೂಲಕ ಮನೆ ಸೇರಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.
Kannada BSI Bible 2016
ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ತಗ್ಗಿನ ಬಾಗಲಿನಿಂದ ಮನೆಗೆ ಬಂದೆನು.
Kannada Bible (KNCL) BSI 2016
ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆ. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು.