Nehemiah 2:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.
Kannada BSI Bible 2016
ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಅವರಿಗೆ - ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೋ; ಯೆರೂಸಲೇಮ್ ಪಟ್ಟಣವು ಹಾಳುಬಿದ್ದದೆ, ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇವಿುನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಹೋಗುವದು ಎಂದು ಹೇಳಿದೆನು.
Kannada Bible (KNCL) BSI 2016
ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.