Nehemiah 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
Kannada BSI Bible 2016
ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು - ಬನ್ನಿರಿ, ಕಟ್ಟೋಣ ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.
Kannada Bible (KNCL) BSI 2016
ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.