Nehemiah 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
Kannada BSI Bible 2016
ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ - ನೀವು ಇಲ್ಲಿ ಮಾಡುವದೇನು? ಅರಸನಿಗೆ ವಿರೋಧವಾಗಿ ತಿರುಗಿಬೀಳಬೇಕೆಂದಿರುತ್ತೀರೋ ಎಂದು ಕೇಳಿದರು.
Kannada Bible (KNCL) BSI 2016
ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.