Nehemiah 2:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.
Kannada BSI Bible 2016
ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರಿಗೆ - ಪರಲೋಕದೇವರು ನಮಗೆ ಸಾಫಲ್ಯವನ್ನನುಗ್ರಹಿಸುವನು. ಆದದರಿಂದ ಆತನ ಸೇವಕರಾದ ನಾವು ಕಟ್ಟುವದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಯೆರೂಸಲೇವಿುನಲ್ಲಿ ಪಾಲೂ ಹಕ್ಕೂ ಹೆಸರೂ ಇರುವದಿಲ್ಲ ಎಂದು ಉತ್ತರಕೊಟ್ಟೆನು.
Kannada Bible (KNCL) BSI 2016
ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು.