Nehemiah 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
Kannada BSI Bible 2016
ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು.
Kannada Bible (KNCL) BSI 2016
ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.