Nehemiah 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.
Kannada BSI Bible 2016
ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.
Kannada Bible (KNCL) BSI 2016
ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.