Nehemiah 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲಕನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು.
Kannada BSI Bible 2016
ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿಪ್ಪೆಬಾಗಲನ್ನು ಜೀರ್ಣೋದ್ಧಾರಮಾಡಿದವನು ಬೇತ್‍ಹಕ್ಕೆರೆವಿುನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದನು.
Kannada Bible (KNCL) BSI 2016
ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿಪ್ಪೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಬೇತ್ ಹಕ್ಕೆರೆಮಿನ ನಾಡೊಡೆಯನೂ, ರೇಕಾಬನ ಮಗನೂ ಆದ ಮಲ್ಕೀಯನೂ, ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.