Nehemiah 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.
Kannada BSI Bible 2016
ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.
Kannada Bible (KNCL) BSI 2016
ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.