Nehemiah 3:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನಿಂದ ಆ ಮನೆಯ ಕೊನೆಯತನಕ ಗೋಡೆಯನ್ನು ಕಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.
Kannada BSI Bible 2016
ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.
Kannada Bible (KNCL) BSI 2016
ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ದುರಸ್ತಿಮಾಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಎಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ, ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.