Nehemiah 3:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಊಜೈಯ ಮಗನಾದ ಪಾಲಾಲನು ಮೂಲೆಯಿಂದ ಹಿಡಿದು ರಾಜನ ಮೇಲ್ಮನೆಯ ಬುರುಜಿನ ತನಕ ಮುಂದುವರಿಸಿದನು. ಇದು ರಾಜನ ಕಾವಲುಪಡೆಯ ಅಂಗಳದ ಸಮೀಪದಲ್ಲಿತ್ತು. ಪರೋಷನ ಮಗನಾದ ಪೆದಾಯನು ಅಲ್ಲಿಂದಾಚೆಗೆ ಅಂದರೆ ಪಾಲಾಲನು ಕೊನೆಗೊಳಿಸಿದಾಚಿನಿಂದ ಮುಂದುವರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.
Kannada BSI Bible 2016
ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿಬರುವ ಮೂಲೆಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.
Kannada Bible (KNCL) BSI 2016
ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆಬುರುಜಿನ ಎದುರಿನ ಭಾಗವನ್ನು ಊಜೈಯ ಮಗ ಪಾಲಾಲನೂ ಇವನ ಆಚೆಯಲ್ಲಿ ಪರೋಷನ ಮಗ ಪೆದಾಯನೂ ಸರಿಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆ ಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ, ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.