Nehemiah 3:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಲೆಮ್ಯನ ಮಗನಾದ ಹನನ್ಯನೂ ಮತ್ತು ಚಾಲಾಫನ ಆರನೆಯ ಮಗನಾದ ಹಾನೂನನೂ ಉಳಿದ ಭಾಗವನ್ನು ಮುಗಿಸಿದರು. ಬೆರೆಕ್ಯನ ಮಗನಾದ ಮೆಷುಲ್ಲಾಮ್ ತನ್ನ ಮನೆಯ ಮುಂದಿದ್ದ ಭಾಗವನ್ನು ಕಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ನಂತರ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್. ಇವನ ನಂತರ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡನು.
Kannada BSI Bible 2016
ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್; ಇವನ ಆಚೆ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.
Kannada Bible (KNCL) BSI 2016
ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಸರಿಮಾಡಿದವನು ಚಾಲಫನ ಆರನೆಯ ಮಗನಾದ ಹಾನೂನ್; ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ, ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್, ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.