Nehemiah 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಯಾದ ಮತ್ತು ಮೆಷುಲ್ಲಾಮ್ ಹಳೆಬಾಗಿಲನ್ನು ಜೋಡಿಸಿದರು. ಯೋಯಾದನು ಪಾಸೇಹನ ಮಗ; ಮೆಷುಲ್ಲಾಮನು ಬೆಸೋದ್ಯನ ಮಗ. ಅವರು ತೊಲೆಗಳನ್ನು ಇಟ್ಟರು; ಬಾಗಿಲುಗಳನ್ನು, ಕದಗಳನ್ನು, ಅಗುಳಿಗಳನ್ನು ಜೋಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು.
Kannada BSI Bible 2016
ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಳೆಯದು ಎಂಬ ಬಾಗಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.
Kannada Bible (KNCL) BSI 2016
ಹಳೆಯದು ಎಂಬ ಬಾಗಿಲನ್ನು ದುರಸ್ತಿಮಾಡಿದವರು ಪಾಸೇಹನ ಮಗ ಯೋಯಾದನು ಹಾಗು ಬೆಸೋದ್ಯನ ಮಗ ಮೆಷುಲ್ಲಾಮನು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಳೆಯದು ಎಂಬ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ, ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು ತಿರುಗಣಿ ಅಗುಳಿಗಳನ್ನು ಹಚ್ಚಿದರು.