Nehemiah 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿಬ್ಯೋನ್ ಮತ್ತು ಮಿಚ್ಫದ ಜನರು ಅಲ್ಲಿಂದಾಚೆಗೆ ಗೋಡೆಯನ್ನು ಕಟ್ಟಿದರು. ಗಿಬ್ಯೋನಿನ ಮೆಲೆಟ್ಯ ಎಂಬವನು ಮತ್ತು ಮೇರೋನೋತಿನ ಯಾದೋನ್ ಎಂಬವನು ಈ ಕೆಲಸವನ್ನು ಮಾಡಿದರು. ಗಿಬ್ಯೋನ್ ಮತ್ತು ಮೇರೋನೋತ್ ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರುಗಳ ಆಡಳಿತಕ್ಕೆ ಒಳಪಟ್ಟಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ನದಿಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್. ಇವರೂ, ಗಿಬ್ಯೋನ್ ಮತ್ತು ಮಿಚ್ಪ ಊರುಗಳವರೂ ಜೀರ್ಣೋದ್ಧಾರ ಮಾಡಿದ್ದರು.
Kannada BSI Bible 2016
ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಹೊಳೆಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ವಿುಚ್ಪ ಊರುಗಳವರೂ ಜೀರ್ಣೋದ್ಧಾರಮಾಡಿದರು.
Kannada Bible (KNCL) BSI 2016
ಅಲ್ಲಿಂದ ನದಿಯಾಚೆಯ ರಾಜ್ಯಪಾಲನ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ಮಿಚ್ಚ ಊರುಗಳವರು ದುರಸ್ತಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಯೂಫ್ರೇಟೀಸ್ ನದಿಯ ರಾಜ್ಯಪಾಲನ ಅಧಿಕಾರದಲ್ಲಿರುವ ಸ್ಥಳಗಳಿಂದ ಗಿಬ್ಯೋನ್ ಮತ್ತು ಮಿಚ್ಪ ಊರುಗಳ, ಗಿಬ್ಯೋನಿನವನಾದ ಮೆಲೆಟ್ಯ, ಮೇರೊನೋತಿನವನಾದ ಯಾದೋನ್ ಇವರೂ, ಜೀರ್ಣೋದ್ಧಾರ ಮಾಡಿದರು.