Nehemiah 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.
Kannada BSI Bible 2016
ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಮುಟ್ಟಿದಾಗ ಅವನು ಬಲು ಹೊಟ್ಟೆಕಿಚ್ಚೂ ಸಿಟ್ಟೂ ಉಳ್ಳವನಾಗಿ
Kannada Bible (KNCL) BSI 2016
ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ,