Nehemiah 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.
Kannada BSI Bible 2016
ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಜನರಿಗೆ - ಕತ್ತಿ ಬಿಲ್ಲು ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬೈಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿ
Kannada Bible (KNCL) BSI 2016
ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನಾನು ಗೋಡೆಯ ಹಿಂದೆ ಇರುವ ತಗ್ಗಿನ ಸ್ಥಳಗಳಲ್ಲಿಯೂ, ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು. ತಮ್ಮ ಖಡ್ಗಗಳನ್ನೂ, ತಮ್ಮ ಈಟಿಗಳನ್ನೂ, ತಮ್ಮ ಬಿಲ್ಲುಗಳನ್ನೂ ಹಿಡಿದುಕೊಂಡಿರುವ ಜನರನ್ನು, ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.