Nehemiah 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು.
Kannada BSI Bible 2016
ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಶತ್ರುಗಳು ತಮ್ಮ ಹಂಚಿಕೆಯು ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥ ಮಾಡಿದನೆಂದೂ ತಿಳಿದುಕೊಂಡಾಗ [ಅವರು ನಮ್ಮನ್ನು ಬಿಟ್ಟು ಹೋದರು;] ನಾವೆಲ್ಲರೂ ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ತಿರಿಗಿ ಹೋದೆವು.
Kannada Bible (KNCL) BSI 2016
ನಮ್ಮ ಶತ್ರುಗಳು ತಮ್ಮ ಹಂಚಿಕೆ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದರೆಂದೂ ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು; ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಶತ್ರುಗಳು ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ದೇವರು ಅದನ್ನು ವ್ಯರ್ಥ ಮಾಡಿದನೆಂದು ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು. ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.