Nehemiah 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿವಸದಿಂದ ನನ್ನ ಜನರು ಅರ್ಧಭಾಗ ಗೋಡೆಯ ಕೆಲಸದಲ್ಲಿ ನಿರತರಾದರು; ಉಳಿದ ಅರ್ಧ ಜನರು ಭರ್ಜಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಕಾವಲಾಗಿದ್ದರು; ಗೋಡೆಯನ್ನು ಕಟ್ಟುತ್ತಿದ್ದ ಯೆಹೂದದ ಜನರ ಹಿಂಭಾಗದಲ್ಲಿ ಸೈನ್ಯಾಧಿಕಾರಿಗಳು ನಿಂತುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಈ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು.
Kannada BSI Bible 2016
ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು; ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ ಗುರಾಣಿ ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು.
Kannada Bible (KNCL) BSI 2016
ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂದಿನಿಂದ ನನ್ನ ಸೇವಕರಲ್ಲಿ ಅರ್ಧ ಜನರು ಕೆಲಸದಲ್ಲಿ ನಿರತರಾದರು; ಮಿಕ್ಕ ಅರ್ಧ ಜನರು ಈಟಿಗಳನ್ನೂ, ಗುರಾಣಿಗಳನ್ನೂ, ಬಿಲ್ಲುಗಳನ್ನೂ, ಕವಚಗಳನ್ನೂ ಧರಿಸಿದರು. ಪ್ರಧಾನರು ಗೋಡೆ ಕಟ್ಟುವವರಾದ ಯೆಹೂದ ಮನೆಯವರ ಹಿಂದೆ ನಿಂತರು.