Nehemiah 4:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೋಡೆ ಕಟ್ಟುವವರೂ ಅವರ ಸಹಾಯಕರೂ ಒಂದು ಕೈಯಲ್ಲಿ ಆಯುಧ ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಕೆಲಸ ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.
Kannada BSI Bible 2016
ಗೋಡೆಯ ಮೇಲೆ ಕಟ್ಟುವವರೂ ಹೊರೆಗಾರರೂ ಹೊರಿಸುವವರೂ ಒಂದು ಕೈಯಲ್ಲಿ ಕೆಲಸವನ್ನು ನಡಿಸಿ ಮತ್ತೊಂದು ಕೈಯಲ್ಲಿ ಆಯುಧವನ್ನು ಹಿಡುಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಪ್ರಕಾರ ಪ್ರಭುಗಳೂ ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು. ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.
Kannada Bible (KNCL) BSI 2016
ಹೊರೆಹೊರುವವರೂ ಒಂದು ಕೈಯಿಂದ ಹೊರೆಹೊತ್ತು ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತು, ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಾ ಇದ್ದರು.