Nehemiah 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲಸಗಾರರು ತಮ್ಮ ಖಡ್ಗಗಳನ್ನು ಸೊಂಟಕ್ಕೆ ಬಿಗಿದೂಕೊಂಡೇ ಕೆಲಸ ಮಾಡಿದರು. ಜನರನ್ನು ಎಚ್ಚರಗೊಳಿಸಲು ತುತ್ತೂರಿ ಊದುವವನು ನನ್ನ ಬಳಿಯಲ್ಲಿಯೇ ನಿಂತಿರುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ.
Kannada BSI Bible 2016
ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡು
Kannada Bible (KNCL) BSI 2016
ಕಟ್ಟುವವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಳ್ಳುತ್ತ ಇದ್ದನು. ನಾನಂತೂ ಕಹಳೆ ಊದುವವನೊಬ್ಬನನ್ನು ನನ್ನ ಬಳಿಯಲ್ಲೇ ಇರಿಸಿಕೊಂಡಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಟ್ಟುವವರಲ್ಲಿ ಪ್ರತಿಯೊಬ್ಬರೂ ತಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವವನು ನನ್ನ ಬಳಿಯಲ್ಲಿದ್ದನು.