Nehemiah 4:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಪ್ರಮುಖ ಕುಟುಂಬಗಳವರನ್ನೂ ಅಧಿಕಾರಿಗಳನ್ನೂ ಮತ್ತು ಉಳಿದ ಜನರನ್ನೂ ಕರೆದು, “ನಾವು ಮಾಡುತ್ತಿರುವುದು ಬಹು ದೊಡ್ಡ ಕಾರ್ಯ; ಗೋಡೆಯ ಉದ್ದಕ್ಕೂ ಚದರಿ ಒಬ್ಬರಿಗೊಬ್ಬರು ತುಂಬಾ ದೂರದಲ್ಲಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಶ್ರೀಮಂತರಿಗೂ, ಅಧಿಕಾರಿಗಳಿಗೂ ಉಳಿದ ಜನರಿಗೂ, “ನಾವು ಮಾಡುವ ಕೆಲಸವು ಬಹಳ ದೊಡ್ಡದೂ, ಅನೇಕ ಸ್ಥಳಗಳಲ್ಲಿ ನಡೆಯುವಂಥದ್ದೂ ಆಗಿದೆ; ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ.
Kannada BSI Bible 2016
ಆಗ ನಾನು ಪ್ರಮುಖ ರಿಗೂ ಅಧಿಕಾರಸ್ಥರಿಗೂ ಇತರ ಜನರಿಗೂ--ಕೆಲಸವು ದೊಡ್ಡದೂ ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶ್ರೀಮಂತರಿಗೂ ಅಧಿಕಾರಿಗಳಿಗೂ ಉಳಿದ ಜನರಿಗೂ - ನಾವು ಮಾಡುವ ಕೆಲಸವು ಬಲುದೊಡ್ಡದೂ ಅನೇಕ ಸ್ಥಳಗಳಲ್ಲಿ ನಡೆಯುವಂಥದೂ ಆಗಿದೆ; ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ.
Kannada Bible (KNCL) BSI 2016
ಶ್ರೀಮಂತರಿಗು, ಅಧಿಕಾರಿಗಳಿಗು ಹಾಗು ಉಳಿದ ಜನರಿಗು, “ನಾವು ಮಾಡುವ ಕೆಲಸ ದೊಡ್ಡದು, ಹಲವಾರು ಎಡೆಗಳಲ್ಲಿ ನಡೆಯುವಂಥದ್ದು; ನಾವು ಗೋಡೆಯ ನಿಮಿತ್ತ ಒಬ್ಬರಿಂದ ಒಬ್ಬರು ದೂರವಾಗಿರುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಶ್ರೇಷ್ಠರಿಗೂ, ಅಧಿಕಾರಿಗಳಿಗೂ, ಇತರ ಜನರಿಗೂ, “ಕೆಲಸವು ದೊಡ್ಡದೂ, ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ, ಒಬ್ಬರಿಗೊಬ್ಬರು ದೂರವಾಗಿದ್ದೇವೆ.