Nehemiah 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪ್ರತಿಯೊಬ್ಬ ಕೆಲಸಗಾರನೂ ಅವನ ಸಹಾಯಕನೂ ಜೆರುಸಲೇಮಿನೊಳಗೇ ರಾತ್ರಿಯನ್ನು ಕಳೆಯಬೇಕು. ರಾತ್ರಿ ಕಾಲದಲ್ಲಿ ಅವರು ಪಹರೆಯವರಾಗಿಯೂ ಹಗಲಲ್ಲಿ ಗೋಡೆ ಕಟ್ಟುವವರಾಗಿಯೂ ಇರಬೇಕು” ಎಂದು ನಾನು ಜನರಿಗೆ ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯು ಹಾಗೂ ಹಗಲಿನಲ್ಲಿ ಕೆಲಸ ನಡಿಸುವಂತೆಯು ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲಿಯೇ ವಾಸಮಾಡಬೇಕು” ಎಂದು ಅಪ್ಪಣೆ ಮಾಡಿದೆನು.
Kannada BSI Bible 2016
ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ಆ ಸಮಯದಲ್ಲಿ ಜನರಿಗೆ - ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವ ಹಾಗೂ ಹಗಲಿನಲ್ಲಿ ಕೆಲಸ ನಡಿಸುವ ಹಾಗೂ ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇವಿುನಲ್ಲೇ ವಾಸಮಾಡಬೇಕು ಎಂದು ಅಪ್ಪಣೆ ಮಾಡಿದೆನು.
Kannada Bible (KNCL) BSI 2016
ಇದಲ್ಲದೆ, ನಾನು ಮೇಸ್ತ್ರಿಗಳಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರಲು ಹಾಗು ಹಗಲಿನಲ್ಲಿ ಕೆಲಸಮಾಡಲು ಸಾಧ್ಯವಾಗುವಂತೆ, ನೀವು ನಿಮ್ಮ ನಿಮ್ಮ ಆಳುಗಳೊಡನೆ ಜೆರುಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆಮಾಡಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯೂ, ಹಗಲಿನಲ್ಲಿ ಕೆಲಸ ನಡೆಸುವಂತೆಯೂ ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆ ಮಾಡಿದೆನು.