Nehemiah 4:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದರಿಂದಾಗಿ ಯಾರೂ ತಮ್ಮ ವಸ್ತ್ರಗಳನ್ನು ಬದಲಾಯಿಸಲಿಲ್ಲ. ನಾನಾಗಲಿ ನನ್ನ ಬಂಧುಗಳಾಗಲಿ ನನ್ನ ಜನರಾಗಲಿ ಪಹರೆಯವರಾಗಲಿ ವಸ್ತ್ರಗಳನ್ನು ಬದಲಾಯಿಸದೆ ಆಯುಧಗಳನ್ನು ಧರಿಸಿಕೊಂಡೇ ಇದ್ದೆವು. ನೀರು ಕುಡಿಯುವಾಗಲೂ ಆಯುಧ ಸನ್ನದ್ಧರಾಗಿರುತ್ತಿದ್ದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೂ ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ನಮ್ಮ ಬಟ್ಟೆಗಳನ್ನು ಬದಲಾಯಿಸಿರಲಿಲ್ಲ. ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು.
Kannada BSI Bible 2016
ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೂ ನನ್ನ ಸಹೋದರರೂ ಸೇವಕರೂ ಮೈಗಾವಲಿನವರೂ ಸ್ನಾನಸಮಯದಲ್ಲಿ ಹೊರತು ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.
Kannada Bible (KNCL) BSI 2016
ನಾನು, ನನ್ನ ಸಹೋದರರು, ಸೇವಕರು ಹಾಗು ಮೈಗಾವಲಿನವರು ಸ್ನಾನ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ಬಟ್ಟೆಗಳನ್ನು ತೆಗೆದುಹಾಕುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೂ, ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ಸ್ನಾನದ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.