Nehemiah 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, “ಈ ಯೆಹೂದ್ಯರು ಕಟ್ಟುತ್ತಿರುವುದೇನು? ಆ ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದುಬೀಳುವುದು” ಎಂದು ವ್ಯಂಗ್ಯವಾಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು.
Kannada BSI Bible 2016
ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯನಾದ ಟೋಬೀಯನು - ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವದು ಅಂದನು.
Kannada Bible (KNCL) BSI 2016
ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ, ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.