Nehemiah 4:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನಿನ್ನ ದೃಷ್ಟಿಯಲ್ಲಿ ಮಾಡಿದ ಪಾಪಗಳನ್ನು ಮನ್ನಿಸಬೇಡ. ಅವರು ಗೋಡೆಯನ್ನು ಕಟ್ಟುವ ನಿನ್ನ ದಾಸರನ್ನು ನಿಂದಿಸಿ ಅವರನ್ನು ನಿರುತ್ಸಾಹಗೊಳಿಸಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.
Kannada BSI Bible 2016
ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಅಪರಾಧವನ್ನು ಕ್ಷವಿುಸಬೇಡ; ನಿನ್ನೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿದ್ದಾರಲ್ಲಾ.
Kannada Bible (KNCL) BSI 2016
ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಟ್ಟುವವರ ಮುಂದೆ ನಿಮ್ಮನ್ನು ಕೆಣಕಿದ್ದರಿಂದ ನೀವು ಅವರ ಅಪರಾಧವನ್ನು ಮುಚ್ಚಬೇಡಿರಿ. ನಿಮ್ಮ ಮುಂದೆ ಇರುವ ಅವರ ಪಾಪಗಳನ್ನು ಅಳಿಸಿಬಿಡಬೇಡಿರಿ ಎಂದು ನಾನು ಪ್ರಾರ್ಥಿಸಿದೆ.