Nehemiah 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.
Kannada BSI Bible 2016
ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಾವು ಕಟ್ಟುವ ಕೆಲಸವನ್ನು ಮುಂದರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಜೋಡನೆಯಾಯಿತು.
Kannada Bible (KNCL) BSI 2016
ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು.