Nehemiah 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು.
Kannada BSI Bible 2016
ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನಿಯರೂ ಅಷ್ಡೋದಿನವರೂ ಯೆರೂಸಲೇವಿುನ ಗೋಡೆಯ ಜೀರ್ಣೋದ್ಧಾರಕಾರ್ಯವು ಮುಂದರಿದು ಅದರ ಸಂದುಗಳು ತಿರಿಗಿ ಕೂಡುತ್ತಾ ಬರುವದನ್ನು ಕೇಳಿ ಬಹುಕೋಪವುಳ್ಳವರಾಗಿ -
Kannada Bible (KNCL) BSI 2016
ಸನ್ಬಲ್ಲಟನು, ಟೋಬೀಯನು, ಅರೇಬಿಯರು, ಅಮ್ಮೋನಿಯರು ಹಾಗು ಅಷ್ಡೋದಿನವರು ಜೆರುಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂಬುದನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು.